Karnataka Civil Police Constable Exam Date 2024

ಸ್ನೇಹಿತರೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ ನಿಗದಿಯಾಗಿದ್ದು ಈ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ.

ಸ್ನೇಹಿತರೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2022-23 ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿರುವ ಮಿಕ್ಕುಳಿದ ವೃಂದದಲ್ಲಿನ ಸುಮಾರು 1137 ಪುರುಷ ಮತ್ತು ಮಹಿಳಾ Civil Police Constable ಸ್ಪರ್ಧಾತ್ಮಕ ಪರೀಕ್ಷೆಯನ್ನು ಇದೆ ಫೆಬ್ರುವರಿ 25 2024 ತಾರೀಕಿನಂದು ಇಲಾಖೆ ನಿಗದಿ ಪಡಿಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುವ ಬಗ್ಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳ ಪೂರ್ವ ಸಿದ್ಧತೆಯ ಕುರಿತು ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಾಗಿ ನಿಗದಿಪಡಿಸಿದ ಕಾಲೇಜುಗಳಲ್ಲಿನ ಪೂರ್ವಸಿದ್ಧತೆಯ ಬಗ್ಗೆ ಪರಿಶೀಲಿಸಿದೆ ಮತ್ತು ಎಲ್ಲಾ ಸಿದ್ಧತೆಯನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ.

ಈ ಬಗ್ಗೆ ಇಲಾಖೆ ನೀಡಿದ ಮಾಹಿತಿಯನ್ನು ಈ ಕೆಳಗೆ ನೀಡಲಾದ ಪ್ರಕಟಣೆಯಲ್ಲಿ ನೀಡಲಾಗಿದ್ದು ಅಭ್ಯರ್ಥಿಗಳು ಓದಿಕೊಳ್ಳಬಹುದು. 

Civil Police Constable Exam Date

ಇನ್ನು ಮುಖ್ಯವಾಗಿ ಈ ಒಂದು ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕದ ಮೂರು ದಿನಗಳ ಮುಂಚೆ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗುತ್ತದೆ. 

ಈ ಒಂದು ಸ್ಪರ್ಧಾತ್ಮಕ ಪರೀಕ್ಷೆಯ ನಿಮ್ಮ ಪರೀಕ್ಷಾ ಕೇಂದ್ರದ ಮಾಹಿತಿಯ ಕುರಿತು ನಿಮಗೆ ಇಲಾಖೆಯಿಂದ ಎಸ್ಎಂಎಸ್ ಮೂಲಕ ಒಂದೆರಡು ವಾರ ಮೊದಲೇ ತಿಳಿಸಲಾಗುತ್ತದೆ.

Spread the Knowledge