Karnataka Data Entry Operator Recruitment 2023

ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ Karnataka Data Entry Operator ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಅತಿ ಶೀಘ್ರದಲ್ಲಿ ನೋಟಿಫಿಕೇಶನ್ ಆಗಲಿದೆ ಎಂಬುದನ್ನು ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತಿಳಿಸಿದೆ.

RTC ನೇಮಕಾತಿ ಮಾಹಿತಿ

ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಒಬ್ಬ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಸಂಬಂಧಪಟ್ಟಂತೆ ನೇಮಕಾತಿ ಮಾಡಿಕೊಳ್ಳಬೇಕು ಎಂಬುದನ್ನು ಸರ್ಕಾರ ಸೂಚನೆ ನೀಡಲಾಗಿದೆ. ಪ್ರಮುಖವಾಗಿ ಗ್ರಾಮ ಪಂಚಾಯಿತಿಗಳಲ್ಲಿ ಒತ್ತಡದ ಕೆಲಸವನ್ನ ಸುಗಮಗೊಳಿಸಲು ಸರ್ಕಾರ ಈ ಒಂದು ನಿರ್ಧಾರವನ್ನು ತೆಗೆದುಕೊಂಡಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶವನ್ನು ಕೂಡ ನೀಡಲಾಗಿದೆ.

ವಿದ್ಯಾರ್ಹತೆ

12th Standard / PUC

ನೇಮಕಾತಿ ವಿಧಾನ

ಈ ಒಂದು ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ನೇಮಕಾತಿ ಪ್ರಕ್ರಿಯೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಗಳಿಸಿರುವ ಗರಿಷ್ಠ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಡಲಾಗುತ್ತದೆ.

ಈಗಾಗಲೇ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ಮೊದಲ ಆದ್ಯತೆಯನ್ನು ನೀಡಬೇಕು ಎಂಬುದನ್ನು ತಿಳಿಸಲಾಗಿದೆ.

ವೇತನ ಶ್ರೇಣಿ

ಈ ಒಂದು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಸಂಬಂಧಪಟ್ಟಂತೆ ಉತ್ತಮವಾದ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಆಯ್ಕೆಯಾಗುವ ನೌಕರರಿಗೆ ಮಾಸಿಕವಾಗಿ 16,738/- ವೇತನವನ್ನು ನಿಗದಿಪಡಿಸಲಾಗಿದೆ.

Spread the Knowledge