KUWSDB Recruitment 2024 : ನೀರು ಸರಬರಾಜು, ಒಳಚರಂಡಿ ಮಂಡಳಿಯಲ್ಲಿ FDA, Engineer ನೇಮಕ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಬೆಂಗಳೂರು (KUWSDB Recruitment 2024) ಇಲ್ಲಿನ 50 AE (Civil) & 14 FDA ಸೇರಿದಂತೆ ಒಟ್ಟು 64 ಹುದ್ದೆಗಳ ನೇಮಕಾತಿಗೆ KEA ಯಿಂದ ಇದೀಗ ಅರ್ಜಿ ಆಹ್ವಾನಿಸಲಾಗಿದೆ.

KUWSDB Recruitment 2024 :

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ kuwsdb.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ವಿವರಗಳನ್ನು ಭರ್ತಿ ಮಾಡಬೇಕು, KUWSDB ಖಾಲಿ ಹುದ್ದೆ 2024 ಅಧಿಸೂಚನೆಯ ಪ್ರಕಾರ ತಮ್ಮ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಫೆಬ್ರವರಿ 2024 ರ KUWSDB ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಇಂಜಿನಿಯರ್, ಪ್ರಥಮ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 10-Mar-2024 ರಂದು ಅಥವಾ ಅದರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

KUWSB Recruitment 2024

ವಿದ್ಯಾರ್ಹತೆ:

Assistant Engineer (Civil) BE/B.Tech
First Division Accounts Assistant (Group-C) BCom

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BCom, BE ಅಥವಾ B.Tech in Civil ಪೂರ್ಣಗೊಳಿಸಿರಬೇಕು.

KUWSDB ಹುದ್ದೆಗಳ ವಿವರ :

ಪೋಸ್ಟ್ ಹೆಸರು ಪೋಸ್ಟ್ ಸಂಖ್ಯೆ
Assistant Engineer (Civil) 50
First Division Accounts Assistant (Group-C) 14

ಹುದ್ದೆವಾರು ವೇತನ ಶ್ರೇಣಿ :

ಸಹಾಯಕ ಇಂಜಿನಿಯರ್ (ಸಿವಿಲ್) : Rs.43100-83900.
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್ ಸಿ) : Rs.27650-52650

ವಯೋಮಿತಿ :

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ
ಪ್ರವರ್ಗ 2A, 2B, 3A, 3B, ಅಭ್ಯರ್ಥಿಗಳಿಗೆ 38 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು 18 ಕನಿಷ್ಠ ವರ್ಷಗಳು ತುಂಬತಕ್ಕದ್ದು.

ಅರ್ಜಿ ಸಲ್ಲಿಸುವ ಅವಧಿ:

ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 10-02-2024
ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10-03-2024
ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 14-03-2024

ಅರ್ಜಿ ಸಲ್ಲಿಸುವ ವಿಧಾನ :

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆಬ್ರುವರಿ 10 ರಿಂದ ಕೆಇಎ ವೆಬ್‌ಸೈಟ್‌ನಲ್ಲಿ ನೀಡಲಾಗುವ ಆನ್‌ಲೈನ್‌ ಲಿಂಕ್‌ ಮೂಲಕ ಅಪ್ಲಿಕೇಶನ್‌ ಸಲ್ಲಿಸಬೇಕು.
    ಅಥವಾ
  • ಈ ಕೆಳಗಿನ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬಹುದು.
    Click Here
  • ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದ್ದಲ್ಲಿ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಬೇಕು
  • ಆದರೆ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಶುಲ್ಕವನ್ನು ಪಾವತಿಸಬೇಕು.
  • ಪಾವತಿಸಿದ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ
  • ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ (ಶೇಕಡ 40ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವವರು ಮತ್ತು ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರವನ್ನು ಹೊಂದಿರಬೇಕು)
ಸೂಚನೆ : ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್ಲೈನ್ OMR ಮಾದರಿ ಮೂಲಕ ಪರೀಕ್ಷೆ ನಡೆಸಲಾಗುವುದು.
Spread the Knowledge